Kannada NewsKarnataka NewsLatestPolitics
*ಬಿಜೆಪಿಗೆ ಮತ್ತೊಂದು ಶಾಕ್; ಕಾಂಗ್ರೆಸ್ ಸೇರಲು ಸಜ್ಜಾದ ಮಾಜಿ ಶಾಸಕಿ*

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಹಿರಿಯೂರು ಮಾಜಿ ಶಾಸಕಿ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಬಿಜೆಪಿ ಹಾಗೂ ಜೆಡಿಎಸ್ ನ ಹಲವು ಹಾಲಿ, ಮಾಜಿ ಶಾಸಕರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ಕಾಂಗ್ರೆಸ್ ನತ್ತ ಮುಖಮಾಡಿದ್ದಾರೆ.
ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಮತ್ತೆ ಕಾಂಗ್ರೆಸ್ ಗೆ ಮರಳು ಸಜ್ಜಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಚರ್ಚಿಸಿದರು.
ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಪೂರ್ಣಿಮಾ, ಕೆಲ ಕಾಲ ಚರ್ಚೆ ನಡೆಸಿದರು. ಪೂರ್ಣಿಮಾ ಹಾಗೂ ಬೆಂಬಲಿಗರು ಅ.20ರಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.