Kannada NewsKarnataka NewsLatestPolitics

*ಮೈತ್ರಿ ಬೆನ್ನಲ್ಲೇ BJPಗೆ ಬಿಗ್ ಶಾಕ್; ಮಾಜಿ ಶಾಸಕ ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಎರಡೂ ಪಕ್ಷಗಳಿಗೆ ನಾಯಕರು ಬಿಗ್ ಶಾಕ್ ನೀಡುತ್ತಿದ್ದಾರೆ. ಸಾಲು ಸಾಲು ಬಿಜೆಪಿ, ಜೆಡಿಎಸ್ ನಾಯಕರು ಪಕ್ಷ ತೊರೆಯಲು ಮುಂದಾಗಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಮುಖಂಡ, ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದರು.

Home add -Advt

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವರಾದ ಎಚ್ ಕೆ ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಕೆಪಿಸಿಸಿ ಕಾರ್ಯಾ ಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಇನ್ನು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಜೆಡಿಎಸ್ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕೂಡ ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ.

Related Articles

Back to top button