ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಟಿ.ರವಿ, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಾಳೆ ಬೆಳಿಗ್ಗೆ 10:30ಕ್ಕೆ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭವಾಗಲಿದೆ. ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ 500ಕ್ಕೂ ಹೆಚ್ಚು ಸದಸ್ಯರು ಭಾಗಿಯಾಗಲಿದ್ದಾರೆ ಎಂದರು.
ಪಕ್ಷ ಸಂಘಟನೆ, ರಾಜ್ಯ ನಾಯಕರ ಪ್ರವಾಸದ ಬಗ್ಗೆ ಕಾರ್ಯಕಾರಿಣಿಯಲ್ಲಿ ಸಮಾಲೋಚನೆ ನಡೆಯಲಿದೆ. ರಾಜ್ಯ ಹಾಗೂ ಕೇಂದ್ರಕ್ಕೆ ಸಂಬಂಧಿಸಿದ ವಿಚಾರಗಳೂ ಚರ್ಚೆಗೆ ಬರಲಿವೆ. ದೇಶಕ್ಕೆ ರಾಜ್ಯದ ಕೊಡುಗೆ ಏನೆಂಬುದರ ಬಗ್ಗೆ ರೂಟ್ ಮ್ಯಾಪ್ ಸಿದ್ಧಪಡಿಸಲಾಗುವುದು. ಈ ಸಂಬಂಧ ಪಕ್ಷದ ಅಜೆಂಡಾ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು.
AICC ಅಧ್ಯಕ್ಷ ಸ್ಥಾನ ಚುನಾವಣೆ ಬಗ್ಗೆ ವ್ಯಂಗ್ಯ:
ಇದೇ ವೇಳೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ ಬಗ್ಗೆ ವ್ಯಂಗ್ಯವಾಡಿರುವ ಸಿ.ಟಿ.ರವಿ, ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಎಂಬ ಡ್ರಾಮಾ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಎಂಬುದೇ ಒಂದು ಡ್ರಾಮಾ. ಬೇಕಾದರೆ ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಕೇಳಿ. ಖರ್ಗೆಯವರು ಸ್ವಇಚ್ಚೆಯಿಂದ ಸ್ಪರ್ಧಿಸುತ್ತಿಲ್ಲ. ರಾಹುಲ್ ಗಾಂಧಿ ಕುಟುಂಬ ಒಪ್ಪಿದ್ರೆ ಮಾತ್ರ ಅಧ್ಯಕ್ಷರ ಆಯ್ಕೆಯಾಗುತ್ತದೆ. 50 ವರ್ಷಗಳಿಂದ ರಾಜಕೀಯದಲ್ಲಿರುವವರಿಗೆ ಹೀಗಾಗಬಾರದು. ಇದು ಮಲ್ಲಿಕಾರ್ಜುನ ಖರ್ಗೆ ಅವರ ವ್ಯಕ್ತಿತ್ವಕ್ಕೆ ಅಲ್ಲ. ಜೀತ ಪದ್ಧತಿಯ ಮನೋಭಾವನೆ ಇರಬಾರದು. ಖರ್ಗೆಯವರು ಸೋನಿಯಾ ಗಾಂಧಿಯವರ ಅಡಿಯಾಳು ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ಪತ್ರಕ್ಕೆ ಸಿಎಂ ಸ್ಪಂದನೆ
https://pragati.taskdun.com/politics/cm-basavaraj-bommairahul-gandhilatter/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ