*BREAKING: ಸುವರ್ಣಸೌಧಕ್ಕೆ ಮುತ್ತಿಗೆ ಯತ್ನ: ವಿಜಯೇಂದ್ರ ಸೇರಿ ಬಿಜೆಪಿ ನಾಯಕರು, ರೈತರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ರೈತರ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬಿಜೆಪಿ ಹಾಗೂ ರೈತರು ಬೆಳಗವೈಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ಮಾಲಿನಿ ಸಿಟಿ ಮೈದನಾದಲ್ಲಿ ರೈತರೊಂದಿಗೆ ಬೃಹತ್ ಪ್ರತಿಭಟನಾ ಸಭೆ ನಡೆಸಿದ ಬಿಜೆಪಿ ನಾಯಕರು ಬಳಿಕ ಸುವರ್ಣಸೌಧ ಮುತ್ತಿಗೆ ಹಾಕಲು ಪಾದಯಾತ್ರೆ ಮೂಲಕ ಸುವರಣಸೌಧದತ್ತ ಹೊರಟರು. ಕೈಯಲ್ಲಿ ಬಾರುಕೋಲು ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಘುತ್ತ ರೈತರೊಂದಿಗೆ ಸುವರ್ಣಸೌಧದತ್ತ ಧಾವಿಸಿದ ಪ್ರತಿಭಟನಾಕಾರರು ರಸ್ತೆ ಮಧ್ಯೆಯೇ ಬ್ಯಾರಿಕೇಡ್ ಗಳನ್ನು ಹಾಕಿ ತಡೆದಿದ್ದಾರೆ.
ಬ್ಯಾರಿಕೇಡ್ ಗಳನ್ನು ತಳ್ಳಿ ಸುವರ್ಣಸೌಧದತ್ತ ಮುನ್ನುಗ್ಗುತ್ತಿದ್ದ ಬಿಜೆಪಿ ನಾಯಕರು, ರೈತರು ಹಾಗೂ ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ಬಿಜೆಪಿ ನಾಯಕರಾದ ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ ಹಾಗೂ ರೈತ ಮುಖಂಡರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ತುಂಬಿ ಕರೆದೊಯ್ದಿದ್ದಾರೆ.



