Kannada NewsKarnataka NewsLatest

*ಕಾಂಗ್ರೆಸ್ ರ‍್ಯಾಲಿಗೆ ಬಿಜೆಪಿ ತಿರುಗೇಟು*: *5 ಸಾವಿರ ಜನರ ಬೃಹತ್ ಮೆರವಣಿಗೆಗೆ ಸಿದ್ಧತೆ*

ಪ್ರಗತಿವಾಹಿನಿ ಸುದ್ದಿ: ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ರ‍್ಯಾಲಿಗೆ ಪ್ರತಿಯಾಗಿ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಕಾಂಗ್ರೆಸ್‌ನ ‘ದೆಹಲಿ ಚಲೋ’ ಪ್ರತಿಭಟನೆಗೆ ಕೌಂಟರ್ ನೀಡಲು ಸುಮಾರು 5,000 ಜನರನ್ನು ಒಳಗೊಂಡ ಬೃಹತ್ ಮೆರವಣಿಗೆ ನಡೆಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.

ಈ ಮೆರವಣಿಗೆಯಲ್ಲಿ 1984ರ ಸಿಖ್ ವಿರೋಧಿ ಗಲಭೆಯ ಸಂತ್ರಸ್ತ ಕುಟುಂಬಗಳ ಸದಸ್ಯರು ಭಾಗವಹಿಸುವ ನಿರೀಕ್ಷೆಯಿದೆ. ಗಲಭೆಯ ಹಿಂಸಾಚಾರವನ್ನು ನೆನಪಿಸುವ ಮೂಲಕ ಕಾಂಗ್ರೆಸ್ ವಿರುದ್ಧ ರಾಜಕೀಯವಾಗಿ ತಿರುಗೇಟು ನೀಡಲು ಬಿಜೆಪಿ ಮುಂದಾಗಿದೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮೆರವಣಿಗೆಯ ನೇತೃತ್ವ ವಹಿಸಲಿದ್ದಾರೆ. ನವೆಂಬರ್ 1ರಂದು ಬೆಳಗ್ಗೆ 11 ಗಂಟೆಗೆ ದೆಹಲಿಯ ಹರಿ ನಗರದಲ್ಲಿ ಮೆರವಣಿಗೆ ನಡೆಯಲಿದೆ. ಪಕ್ಷದ ಹಿರಿಯ ಸಿಖ್ ನಾಯಕರು ಸೇರಿದಂತೆ ಹಲವು ಪ್ರಮುಖ ಬಿಜೆಪಿ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರ‍್ಯಾಲಿ

ಇನ್ನೊಂದೆಡೆ, ಕಾಂಗ್ರೆಸ್ ನವೆಂಬರ್ 1ರಂದು ರಾಮಲೀಲಾ ಮೈದಾನದಲ್ಲಿ ಬೃಹತ್ ರ‍್ಯಾಲಿ ಆಯೋಜಿಸಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ.

ರಾಹುಲ್ ಗಾಂಧಿ ಕರೆ ನೀಡಿರುವ ಈ ರ‍್ಯಾಲಿಯಲ್ಲಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಕಾಂಗ್ರೆಸ್ ತನ್ನ ಪ್ರತಿಭಟನೆಯ ಮೂಲಕ ದೇಶದ ಗಮನ ಸೆಳೆಯಲು ಸಿದ್ಧತೆ ನಡೆಸಿದ್ದರೆ, ಅದೇ ದಿನ ಬಿಜೆಪಿ ಕೂಡ ಪ್ರತ್ಯೇಕ ಮೆರವಣಿಗೆ ಆಯೋಜಿಸುವ ಮೂಲಕ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

Related Articles

Back to top button