ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –15 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಬಹುತೇಕ ನಿಚ್ಛಳವಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟೂರು ಕೆ.ಆರ್.ಪೇಟೆಯಲ್ಲಿ ಗೆಲ್ಲುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರದಿದೆ. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಮೊದಲಾದವರು ಕೆ.ಆರ್.ಪೇಟೆಯ ಚುನಾವಣೆ ಉಸ್ತುವಾರಿ ಹೊತ್ತಿದ್ದರು.
ಶಿವಾಜಿನಗರ ಮತ್ತು ಹುಣಸೂರಿನಲ್ಲಿ ಕಾಂಗ್ರೆಸ್, ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಉಳಿದೆಲ್ಲ ಕಡೆ ಬಿಜೆಪಿ ಅಭ್ಯರ್ಥಿಗಳು ಮುಂದಿದ್ದಾರೆ. ಯಶವಂತಪುರದಲ್ಲಿ ಬಿಜೆಪಿ ಅಲ್ಪ ಅಂತರದ ಮುನ್ನಡೆ ಸಾಧಿಸಿದೆ.
ಬೆಳಗಾವಿ ಜಿಲ್ಲೆಯ ಎಲ್ಲ ಮೂರೂ ಕ್ಷೇತ್ರಗಳಲ್ಲಿ ಬೆಜೆಪಿ ಗೆಲುವಿನತ್ತ ಮುನ್ನಡೆದಿದೆ. ಗೋಕಾಕ, ಅಥಣಿ, ಕಾಗವಾಡ ಕ್ಷೇತ್ರಗಳಲ್ಲಿ ಬಿಜೆಪಿ ಕಾಂಗ್ರೆಸ್ ಅಭ್ಯರ್ಥಿಗಳಿಗಿಂತ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಜೆಎಡಿಎಸ್ ಎಲ್ಲ ಕ್ಷೇತ್ರಗಳಲ್ಲೂ ತನ್ನ ಅಸ್ತಿತ್ವ ಕಳೆದುಕೊಂಡಿದೆ.
ಕೆ.ಆರ್.ಪೇಟೆಯಲ್ಲಿ ಪ್ರೀತಂ ಗೌಡ, ಶಂಕರಗೌಡ ಪಾಟೀಲ ಸೇರಿದಂತೆ ನಮ್ಮ ನಾಯಕರೆಲ್ಲ ಪ್ರಯತ್ನ ಮಾಡಿ ಗೆಲುವು ತಂದುಕೊಟ್ಟಿದ್ದಾರೆ.
-ವಿಜಯೇಂದ್ರ, ಕೆ.ಆರ್.ಪೇಟೆ ಉಸ್ತುವಾರಿ, ಯಡಿಯೂರಪ್ಪ ಪುತ್ರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ