ಪ್ರಗತಿವಾಹಿನಿ ಸುದ್ದಿ, ಮಾಂಜರಿ : ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶೈಲಜಾ ಸುರೇಶ ಪಾಟೀಲ ಹಾಗೂ ಅಣ್ಣಪ್ಪ ಸಿದ್ದಪ್ಪ ಹರಕೆ ಆಯ್ಕೆಯಾದರು.
ಅಂಕಲಿ ೩೩ ಸದಸ್ಯ ಬಲವನ್ನು ಹೊಂದಿರುವ ಚುನಾವಣೆಯಲ್ಲಿ ೧೯ ರಲ್ಲಿ ಬಿಜೆಪಿ ಪಕ್ಷದ ಪರ ಸದಸ್ಯರು ಆಯ್ಕೆಯಾದರೆ, ೧೪ ರಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಆಯ್ಕೆಯಾಗಿದ್ದರು. ಇಂದು ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಪರ ಶೈಲಜಾ ಸುರೇಶ ಪಾಟೀಲ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಿದ್ದಪ್ಪ ಹರಕೆ ಅವರು ನಾಮಪತ್ರವನ್ಬು ಸಲ್ಲಿಸಿದರು.
ಕಾಂಗ್ರೆಸ್ ಪರ ಅಧ್ಯಕ್ಷ ಸ್ಥಾನಕ್ಕೆ ಆರತಿ ಕೇದಾರಿ ಕಮತೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಲ್ಲಾಭಕ್ಷ ಬಾದಶಾಹ ಪಟವೆಗಾರಯವರು ನಾಮಪತ್ರವನ್ನು ಸಲ್ಲಿಸಿದ್ದರು.
ನಂತರ ಚುನಾವಣೆಯಲ್ಲಿ ಬಿಜೆಪಿ ಪರ ಅಭ್ಯರ್ಥಿಯಾದ ಶೈಲಜಾ ಸುರೇಶ ಪಾಟೀಲ ೧೮ ಮತಗಳನ್ನು ಪಡೆದು ಅಧ್ಯಕ್ಷರಾಗಿ ಚುನಾಯಿತರಾದರೆ, ಉಪಾಧ್ಯಕ್ಷರಾಗಿ ಸಿದ್ದಪ್ಪ ಅಣ್ಣಪ್ಪ ಹರಕೆ ೨೦ ಮತಗಳನ್ನು ಪಡೆದುಕೊಂಡು ಉಪಾಧ್ಯಕ್ಷರಾಗಿ ಚುನಾಯಿತರಾದರು.
ಫಲಿತಾಂಶಗಳು ಹೊರಬೀಳುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಗುಲಾಲು ಎರಚಿ, ಸಿಹಿ ತಿನ್ನಿಸಿ ಸಂಭ್ರಮಿಸಿದರು. ನಂತರ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಸತ್ಕರಿಸಿದರು.
ಹಟ್ಟಿಹೊಳಿ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಈ ಸಂಧರ್ಭದಲ್ಲಿ ಚಿದಾನಂದ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾದ ಮಲ್ಲಿಕಾರ್ಜುನ ಕೋರೆ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಕಾಸ ಪಾಟೀಲ, ತುಕಾರಾಮ ಪಾಟೀಲ , ವಿವೇಕ ಕಮತೆ, ಅಂಕಲಿ ಗ್ರಾ ಪಂ ಸದಸ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ