Kannada NewsKarnataka NewsNationalPolitics

*ಬಿಜೆಪಿ ಬಡವರ ವಿರೋಧಿಯಾಗಿದೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ : ರಾಜ್ಯದ ಬಿಜೆಪಿ ಬಡವರ ವಿರೋಧಿಯಾಗಿದ್ದು ಅದು ತನ್ನ ನೈತಿಕತೆ ಕಳೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. 

ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳು ಪ್ರತಿಯೊಬ್ಬರನ್ನೂ ತಲುಪುತ್ತಿದೆ. ಆದರೆ ಬಿಜೆಪಿ ಇದಕ್ಕೆ ಕಲ್ಲು ಹಾಕಲು ಹೊರಟಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಜಾರಿಯಲ್ಲಿದೆ. ಇದರ ಉಪಯೋಗವನ್ನು ಪ್ರತಿಯೊಬ್ಬ ಮಹಿಳೆಯೂ ಪಡೆದುಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬರಿಗೂ ಉಚಿತವಾಗಿ ಏಳು ಕೆಜಿ ಅಕ್ಕಿ ಕೊಡುವ ನಿರ್ಧಾರವನ್ನು ಮಾಡಿದ್ದೇ ಸಿದ್ದರಾಮಯ್ಯನ ಸರ್ಕಾರ. ಅದನ್ನು ಏಳರಿಂದ ಐದು ಕೆಜಿಗೆ ಇಳಿಸಿದ್ದು ಬಿಜೆಪಿ ಸರ್ಕಾರ ಎಂದು ಸಿಎಂ ಹರಿಹಾಯ್ದರು.

ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ನಬಾರ್ಡ್ ಕೃಷಿ ಸಾಲ ಪರಿಷ್ಕರಣೆಯ ಬಗ್ಗೆ ಮನವಿ ಸಲ್ಲಿಸಿದರು. ನಬಾರ್ಡ್ ಸಾಲ ಮೊತ್ತ ಧೀಡೀರ್ ಕಡಿತ ಮಾಡಬಾರದು. ಇದರಿಂದ ಕೃಷಿ ಸಹಕಾರ ಕ್ಷೇತ್ರಕ್ಕೆ ಹೊಡೆತ ಬೀಳಲಿದೆ. ಈ ಬಾರಿ ಒಳ್ಳೆಯ ಮಳೆಯಿಂದಾಗಿ ರೈತರು ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಈಗ ಸಾಲದ ಅವಶ್ಯಕತೆಯಿದೆ. ಆರ್‌ಬಿಐ ಮತ್ತು ನಬಾರ್ಡ್ ಕೂಡಲೇ ಕೃಷಿ ಅಲ್ಪಾವಧಿ ಸಾಲದ ಮೊತ್ತವನ್ನು ಹೆಚ್ಚಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button