Latest

ಇಂದು ಸರಣಿ ಸಭೆ ನಡೆಸಲಿದ್ದಾರೆ ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಜಲ ಸಂಪನ್ಮೂಲ (ಬೃಹತ್ ಹಾಗೂ ಮಧ್ಯಮ ನೀರಾವರಿ) ಮತ್ತು ಬೆಂಗಳೂರು ನಗರಾಭಿವೃದ್ಧಿ ಖಾತೆಗಳನ್ನು ವಹಿಸಿಕೊಂಡಿರುವ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ರಾಜಧಾನಿಯಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಹಡ್ಸನ್ ವೃತ್ತದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಅವರು ಮಧ್ಯಾಹ್ನ 2 ಗಂಟೆಗೆ ಕುಮಾರಪಾರ್ಕ್ ಪಶ್ಚಿಮದ ಬಿಡಿಎ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.

Related Articles
Home add -Advt

ಸಂಜೆ 5 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿ ನಂ. 313ರಲ್ಲಿ ನೀರಾವರಿ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳ ಜತೆ ಇಲಾಖೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

https://pragati.taskdun.com/praveens-tweet-against-siddaramaiah-went-viral-after-3-years/
https://pragati.taskdun.com/the-best-time-came-again-to-buy-gold/
https://pragati.taskdun.com/ambati-rayudu-announces-retirement-from-ipl/

Related Articles

Back to top button