Kannada NewsKarnataka NewsLatest
ಬಿಜೆಪಿಯವರು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ – ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಚನ್ನರಾಜ ಹಟ್ಟಿಹೊಳಿ ಪರ ಪ್ರಚಾರ
ಪ್ರಗತಿವಾಹಿನಿ ಸುದ್ದಿ, ಬೈಲಹೊಂಗಲ : ಬಿಜೆಪಿ ಸರ್ಕಾರಕ್ಕೆ ಮೂರು ವರ್ಷದಲ್ಲಿ ಒಂದೇ ಒಂದು ಮನೆ ನಿರ್ಮಾಣ ಮಾಡಲಿಕ್ಕೆ ಆಗಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ, ಸಾವಿರಾರು ಮನೆಗಳನ್ನು ನೀಡಿದ್ದೇವೆಂದು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.


ನಮ್ಮ ಕಡೆ ಗೆಲ್ಲುವಷ್ಟು ಮತದಾರರು ಇದ್ದಾರೆ :
ಈಗಾಗಲೇ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳಿಂದ ಗೊಂದಲ ಆಗಿದೆ. ನಮ್ಮ ಕಡೆ ಗೆಲ್ಲುವಷ್ಟು ಮತದಾರರು ಇದ್ದಾರೆ. ಆತಂಕ ಪಡುವ ಅಗತ್ಯವಿಲ್ಲವೆಂದರು.

” ಬಿಜೆಪಿಯಲ್ಲಿ ವ್ಯಕ್ತಿಗತ ಲಾಭಕ್ಕಾಗಿ ಚುನಾವಣೆ ಮಾಡುತ್ತಾರೆ. ಆದರೆ ನಾವು ಹಾಗಲ್ಲ, ಪಕ್ಷದ ಅಭ್ಯರ್ಥಿ ಗೆದ್ದರೆ ಪಕ್ಷಕ್ಕೆ ಶಕ್ತಿ ಬರಲಿದೆ. ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿಗೆ ಮತ ನೀಡಿ ಆಶೀರ್ವಾದ ಮಾಡಿ, ನಿಮ್ಮ ಕೆಲಸ ಮಾಡಲು ಅವಕಾಶ ನೀಡಬೇಕು ” ಎಂದರು.



ಈ ಸಂದರ್ಭದಲ್ಲಿ ಬೈಲಹೊಂಗಲದ ಎಲ್ಲ ಮುಖಂಡರು, ಕ್ಷೇತ್ರದ ಶಾಸಕರಾದ ಮಹಾಂತೇಶ ಕೌಜಲಗಿ, ವಿನಯ ನಾವಲಗಟ್ಟಿ, ಕಿರಣ ಸಾಧುನವರ, ಮಹಾಂತೇಶ ಮತ್ತಿಕೊಪ್ಪ, ಈರಣ್ಣ ಬೆಟಗೇರಿ, ಶಿವರುದ್ರ ಹಟ್ಟಿಹೊಳಿ, ಶಂಕರಗೌಡ ಪಾಟೀಲ, ಬಾಬು ಕುಡಸೊಮಣ್ಣವರ, ಬಸವರಾಜ ಜನ್ಮಟ್ಟಿ, ರಾಜಶೇಖರ ಮೂಗಿ, ಚಂದ್ರು ಕಡೆಮನಿ, ಈರಣ್ಣ ಸಂಪಗಾವಿ, ಜಗದೀಶ ತೋಟಗಿ, ಮಲ್ಲಪ್ಪ ಮುರಗೋಡ್, ಪಕ್ಷದ ಕಾರ್ಯಕರ್ತರು ಹಾಗೂ ನೂರಾರು ಮಹಿಳೆಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ