Belagavi NewsBelgaum NewsKannada NewsKarnataka NewsLatestPolitics

*ಬಿಜೆಪಿಯವರು ಕೆಲಸ ಮಾಡದೇ ಪ್ರಚಾರ ಪಡೆಯುತ್ತಿದ್ದು, ಕಾಂಗ್ರೆಸ್‌ನವರಿಗೆ ಕೆಲಸ ಮಾಡಿದರೂ ಪ್ರಚಾರ ಸಿಗುತ್ತಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೈಲಹೊಂಗಲ: ಬಿಜೆಪಿಯವರು ಕೆಲಸ ಮಾಡದೇ ಪ್ರಚಾರ ಪಡೆಯುತ್ತಿದ್ದು, ಕಾಂಗ್ರೆಸ್‌ನವರಿಗೆ ಕೆಲಸ ಮಾಡಿದರೂ ಪ್ರಚಾರ ಸಿಗುತ್ತಿಲ್ಲ. ಕಾರಣ ಯುವ ಕಾರ್ಯಕರ್ತರು ಸರ್ಕಾರ, ಸಚಿವರು, ಶಾಸಕರು ಮಾಡಿದ ಅಭಿವೃದ್ಧಿ ಕೆಲಸವನ್ನು ಜನಕ್ಕೆ ತಿಳಿಸುವ ಕೆಲಸ ಮಾಡುವ ಮೂಲಕ ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಲಿಷ್ಠಗೊಳಿಸಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಕರೆ ನೀಡಿದರು.

ಇಲ್ಲಿನ ಬಿ.ಬಿ. ಗಣಾಚಾರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಯುವಕರನ್ನು ಜಾಗೃತಗೊಳ್ಳಿಸಲು ʻಯುವ ಪರ್ವ ಪ್ರತಿಜ್ಞೆʼ  ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಇಪ್ಪತ್ತೈದು ಘಟಕಗಳಿವೆ. ಅದಲ್ಲಿ ಯುವ ಕಾಂಗ್ರೆಸ್‌ ಘಟಕವೂ ಒಂದು. ಈ ಯುವ ಕಾಂಗ್ರೆಸ್‌ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಮಾತ್ರ ಪಕ್ಷ ಚುನಾವಣೆ ನಡೆಸುತ್ತದೆ. ಇನ್ನುಳಿದ ಪದಾಧಿಕಾರಿಗಳನ್ನು ನೇರವಾಗಿ ನೇಮಕ ಮಾಡಲಾಗುತ್ತಿದೆ. ಆದ್ದರಿಂದ ಯುವ ಕಾಂಗ್ರೆಸ್‌ ಚುನಾವಣೆಯಲ್ಲಿ ಆಯ್ಕೆಯಾದ ಸರ್ವರೂ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕೆಂದರು.

2028ರ ಚುನಾವಣೆ ಎದುರಿಸಲು ಇಂದಿನಿಂದಲೇ ಸಿದ್ದತೆ ನಡೆಸಿ, ಚುನಾವಣೆಗೆ ಇನ್ನು ಮೂರು ವರ್ಷ ಕಾಲಾವಕಾಶ ಇದೆ. ಈ ಅಧಿಯಲ್ಲಿ ಎಷ್ಟು ಜನಕ್ಕೆ ನೀವು ಹತ್ತಿರ ಆಗುತ್ತಿರಿ, ಜನರ ಸಮಸ್ಯೆಗಳಿಗೆ ಯಾವ ರೀತಿ ಪರಿಹಾರ ಕಲ್ಪಿಸುತ್ತಿರಿ ಎಂಬುವುದು ಮುಖ್ಯವಾಗುತ್ತದೆ. ಕೇವಲ ಸಿಎಂ, ಸಚಿವರು ಬಂದಾಗ ರಸ್ತೆಯಲ್ಲಿ ಭಾವಚಿತ್ರ ಅಂಟಿಸಿದರೆ ಸಾಲದು, ಪ್ರಾಮಾಣಿಕವಾಗಿ ಪಕ್ಷದಲ್ಲಿ ಕೆಲಸ ಮಾಡಬೇಕು. ಯಾರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೋ ಅವರನ್ನು ಪಕ್ಷ ಖಂಡಿತ ಗುರುತಿಸುತ್ತದೆ ಎಂದು ತಿಳಿಸಿದರು. 

Home add -Advt

ಯಾವುದೇ ಇಲಾಖೆ ಇರಲಿ, ಅಥವಾ ಅಧಿಕಾರಿಗಳಾಗಲಿ ಕೆಲಸ ಮಾಡುವವರಿಗೆ ನಮ್ಮ ಪ್ರೋತ್ಸಾಹ ಸದಾ ಇರುತ್ತದೆ. ಶಾಸಕ ಮಹಾಂತೇಶ ಕೌಜಲಗಿ ಅವರು ಕ್ಷೇತ್ರದಲ್ಲಿ ಒಳ್ಳೆಯ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೆ ಅವರ ಮಾಡಿದ್ದ ಕೆಲಸಗಳನ್ನು ಜನತೆಗೆ ತಿಳಿಸುವ ಕಾರ್ಯವಾಗಿಲ್ಲ. ಮುಂದೆಯಾದರೂ ಯುವ ಕಾರ್ಯಕರ್ತರು ಕ್ಷೇತ್ರದಲ್ಲಿ ಆದ ಅಭಿವೃದ್ಧಿಗಳನ್ನು ಜನತೆಗೆ ತಿಳಿಸಬೇಕೆಂದು ಸೂಚಿಸಿದರು. 

ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ ಗೌಡ ಮಾತನಾಡಿ,  ಬೆಳಗಾವಿ ಜಿಲ್ಲೆಅನೇಕ ವೀರ ಶೂರರನ್ನು ಹೊಂದಿದ ಜಿಲ್ಲೆ ಎಂದು ಹೆಸರುವಾಸಿಯಾಗಿದೆ. ಈ ನೆಲದಲ್ಲಿ ಮಹಾತ್ಮಾ ಗಾಂಧೀಜಿ ಅವರು  ಕಾಲಿಟ್ಟಿದ್ದು ಎಂದು ಮರೆಯಲು ಸಾಧ್ಯವಿಲ್ಲ. ಹೀಗಾಗಿ ಮಹಾತ್ಮರ ಆದರ್ಶಗಳನ್ನು ಇಟ್ಟಕೊಂಡು ನಾವು ಪಕ್ಷವನ್ನು ಸಂಘಟಿಸೋಣ. ಇನ್ನು 2023ರಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿದೆ ಅಂದರೆ ಅದಕ್ಕೆ ಯುವ ಕಾಂಗ್ರೆಸ್‌ ಕಾರ್ಯಕರ್ತರ ಶ್ರಮವೂ ಇದೆ. 2028ಕ್ಕೂ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸೋಣ ಎಂದರು.

ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಕಾಂಗ್ರೆಸ್‌ ಪಕ್ಷವನ್ನು ಬಲಿಷ್ಠಗೊಳಿಸಲು ಶ್ರಮ ಪಡುತ್ತಿರುವ ನಿಮ್ಮ ಕಾರ್ಯಕ್ಕೆ ನಮ್ಮ ಬೆಂಬಲ ಸದಾ ಇದ್ದೆ ಇರುತ್ತೇದೆ. ಅದರೊಂದಿಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಸರ್ಕಾರದ ಯೋಜನೆಗಳನ್ನು ಜನತೆಗೆ ಮುಟ್ಟಿಸುವ ಕಾರ್ಯ ಮಾಡಬೇಕೆಂದು ಸಲಹೆ ನೀಡಿದರು. 

ತಾಲೂಕು, ಗ್ರಾಮೀಣ ಪ್ರದೇಶದ ಭೂತಮಟ್ಟದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ವಿಶ್ವಾಸಕ್ಕೆ ತೆಗೆದುಕೊಂಡು.  ಪಕ್ಷ ಸಂಘಟನೆಯಲ್ಲಿ  ಸಕ್ರಿಯವಾಗಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಕಾರ್ತೀಕ್‌ ಪಾಟೀಲ ಅವರ ಕಾರ್ಯಕ್ಕೆ ಮುಂದಿನ ದಿನಗಳಲ್ಲಿ ಉನ್ನತ ಹುದ್ದೆ ಸಿಗಲಿದೆ‌. ಯಾವುದೇ ಫಲಾಪೇಕ್ಷ ಬಯಿಸದೆ ಸರಳ ಯುವನಾಯಕ ಎಂದು ಸಚಿವರು ಕಾರ್ತೀಕ್‌ ಅವರನ್ನು ಗುಣಗಾನ ಮಾಡಿದರು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಮೀ ಹೆಬ್ಬಾಳ್ಕರ್ ಅವರು ಯುವ ಕಾಂಗ್ರೆಸ್‌ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.   ಇದೇ ವೇಳೆ ಯುವ ಕಾಂಗ್ರೆಸ್‌ ನ ಜಿಲ್ಲಾ ಘಟಕದ ಪ್ರದಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ ಪ್ರಮಾಣ ವಚನ ಬೋಧಿಸಿದರು.  

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಾಹುಲ್‌ ಜಾರಕಿಹೊಳಿ, ಶಾಸಕರಾದ  ಬಾಬಾ ಸಾಹೇಬ್ ಪಾಟೀಲ್, ವಿಶ್ವಾಸ್ ವೈದ್ಯ,  ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕಾರ್ತಿಕ ಪಾಟೀಲ್ , ಭಾರತೀಯ ಯುವ ಕಾಂಗ್ರೆಸ್ ಮತ್ತು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಬಂಡಾರಿ, ಜಿಲ್ಲಾ ಕಾಂಗ್ರೆಸ್‌ ಗ್ರಾಮೀಣ ಅಧ್ಯಕ್ಷ ವಿನಯ್ ನಾವಲಗಟ್ಟಿ, ಮುಖಂಡರಾದ ಮಹಾಂತೇಶ ಕಡ್ಡಾಡಿ, ರಾಜ್ಯ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಅಬ್ದುಲ್ ದೇಸಾಯಿ, ಮೃಣಾಳ ಹೆಬ್ಬಾಳಕರ್‌   ಸೇರಿದಂತೆ ಇತರರು ಇದ್ದರು.

Related Articles

Back to top button