*ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಇದರಲ್ಲಿ ರಾಜಕೀಯ ಮಾಡುತ್ತಿದೆ ಎಂದಿದ್ದಾರೆ.
ಈಗಾಗಲೇ ಪ್ರಕರಣವನ್ನು ಎಸ್‌ಐಟಿಗೆ ನೀಡಲಾಗಿದೆ. ಅವರು ತನಿಖೆ ಆರಂಭಿಸಿದ್ದಾರೆ ಎಂದು ಸಿಎಂ ಹೇಳೆದ್ದಾರೆ. ಆದರೆ ಬಿಜೆಪಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದ ಬಗ್ಗೆ ಮಾತನಾಡಿ ಬಿಜೆಪಿಯವರು ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಿ ಎನ್ನುತ್ತಾರೆ. ಅದು ಸಾಧ್ಯವಿಲ್ಲ ಎಂದಿದ್ದಾರೆ.
ಬಿಜೆಪಿಯವರು ಆಡಳಿತದಲ್ಲಿದ್ದಾಗ ಯಾವ ಕೇಸನ್ನೂ ಸಿಬಿಐಗೆ ನೀಡಿಲ್ಲ ಈಗ ಯಾಕೆ ಒತ್ತಾಯಿಸುತ್ತಿದ್ದಾರೆ ಎಂದು ಸಿಎಂ ಪ್ರಶ್ನಿಸಿದರು.
ಇನ್ನು ವಂಚನೆ ಪ್ರಕರಣದ ಅಡಿ ಎಸ್‌ಐಟಿ ನಾಲ್ಕು ಹೊಸ ಪ್ರಕರಣಗಳನ್ನು ದಾಖಲಿಸಿದೆ. ಬಿಜೆಪಿ ಹೋರಾಟದ ಬೆನ್ನಲ್ಲೇ ಪ್ರಕರಣ ದಾಖಲಿಸಿರುವುದು ಗಮನ ಸೆಳೆದಿದೆ. ಸಿಬಿಐನಲ್ಲೂ ಬ್ಯಾಂಕಿಂಗ್ ಸಂಬಂಧಪಟ್ಟಂತೆ ತನಿಖೆ ನಡೆಸಲಾಗುತ್ತಿದೆ.
ವಾಲ್ಮೀಕಿ ನಿಗಮದ ಮೃತ ಅಧಿಕಾರಿಗೆ ನ್ಯಾಯ ದೊರಕಿಸಬೇಕು ಎಂದಿರುವ ಬಿಜೆಪಿ, ಮಾಜಿ ಸಚಿವ ನಾಗೇಂದ್ರ ಅವರ ವಿಚಾರಣೆಯನ್ನು ಏಕೆ ನಡೆಸಿಲ್ಲ ಎಂದು ಪ್ರಶ್ನಿಸಿದೆ. ಅಲ್ಲದೆ ರಾಜ್ಯದ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ