
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಪಕ್ಷದ ಆಂತರಿಕ ವಿಷಯಗಳನ್ನು ಸಾರ್ವಜನಿಕವಾಗಿ ಮಾತನಾಡಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಐವರಿಗೆ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ.
ಶಾಸಕರಾದ ಬಿ.ಪಿ.ಹರೀಶ್, ಶಿವರಾಮ ಹೆಬ್ಬಾರ್, ಎಸ್.ಟಿ.ಸೋಮಶೇಖರ, ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ ಮತ್ತು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ.
72 ಗಂಟೆಯೊಳಗೆ ನೊಟೀಸ್ ಗೆ ಉತ್ತರಿಸಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.