Latest

ಹೊಸ ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್, ಜೆಡಿಎಸ್ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ವಿವಾದಕ್ಕೂ ಕಾರಣವಾಗುತ್ತಿದೆ.

ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದೆ. ಸಿದ್ದರಾಮಯ್ಯ ಅವರನ್ನು ಜನ ಸಿದ್ರಾಮುಲ್ಲಾ ಖಾನ್ ಎಂದೇ ಕರೆಯುತ್ತಾರೆ. ಅವರು ಮತ್ತೆ ಸಿಎಂ ಆದರೆ ಹಿಂದೂಗಳ ಹತ್ಯೆಯಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ರೋಷಾವೇಶದ ಭಾಷಣ ಮಾಡಿದ ಸಿ.ಟಿ.ರವಿ, ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತದೆ. ಸಿದ್ರಾಮುಲ್ಲಾ ಯಾವುದೇ ಕಾರಣಕ್ಕೂ ಮತ್ತೆ ಸಿಎಂ ಆಗಲು ಸಾಧ್ಯವಿಲ್ಲ. ಸಿದ್ರಾಮುಲ್ಲಾ ಅಧಿಕಾರಕ್ಕೆ ಬಂದರೆ ಹಿಂದೂ ಅರ್ಚಕರ ಹತ್ಯೆಯಾಗುತ್ತದೆ. ಅದೇ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದೂ ಅರ್ಚಕರಿಂದ ದತ್ತ ಜಯಂತಿ ನಡೆಯುತ್ತದೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ನಡೆದ ಬಿಜೆಪಿ ಸಮಾವೇಶದ ವೇದಿಕೆಯಲ್ಲಿ ಸಿ.ಟಿ.ರವಿ ಪ್ರಚೋದನಕಾರಿ ಭಾಷಣ ಮಾಡಿದ್ದು, ವಿಪಕ್ಷ ನಾಯಕ, ಮಾಜಿ ಸಿಎಂ ಆಗಿರುವ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವುದು ಖಂಡನೀಯ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

Home add -Advt

ಸಿಎಂ ಬೊಮ್ಮಾಯಿ ಹೆಬ್ಬೆಟ್ಟು ಎನ್ನುವುದಾದ್ರೆ ನಿಮ್ಮನ್ನು ಏನಂತಾ ಕರೀಬೇಕು?

https://pragati.taskdun.com/r-ashokreactionh-d-kumaraswamystatmenthebbattu-cm/

Related Articles

Back to top button