EducationKannada NewsKarnataka News

*ಮನೆ ಕಟ್ಟಲು ಪರವಾನಿಗೆ ನೀಡದ ಪಿಡಿಓ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಪಿಡಿಒ ಮನೆ ಕಟ್ಟಲು ಪರವಾನಗಿ ನೀಡದ ಹಿನ್ನೆಲೆಯಲ್ಲಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯತ್‌ನಲ್ಲಿ ನಡೆದಿದೆ. 

ಕಡಬಗೆರೆ ಪಂಚಾಯತ್ ವ್ಯಾಪ್ತಿಯ ಪವನಪುರ ಗ್ರಾಮದ ನಿವಾಸಿ ಕೆ. ಬಸವರಾಜ್ ಎಂಬುವವರು ಗ್ರಾಮ ಪಂಚಾಯತ್ ಕಚೇರಿಯಲ್ಲೇ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ದೃಶ್ಯ ಸಾಮಾಜೀಕ ಜಾಲತಾಣದಲ್ಲಿ ವೈರಲ್ ಆಗಿದೆ.

Home add -Advt

ಮನೆ ನಿರ್ಮಾಣಕ್ಕೆ ಇ-ಸ್ವತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದರೂ ಅನುಮತಿ ನೀಡಲಾಗಿಲ್ಲವೆಂದು ರೈತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರವಾನಗಿ ಇಲ್ಲದೇ ಬ್ಯಾಂಕ್ ಸಾಲ ಸಿಗುತ್ತಿಲ್ಲ. ಕಳೆದ ಆರು ತಿಂಗಳಿನಿಂದ ಕಚೇರಿಗೆ ಸುತ್ತಾಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಈ ವೇಳೆ ಪಿಡಿಒ ಆಗಿರುವ ಕೃಷ್ಣಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಚೇರಿಯಲ್ಲೇ ಅರ್ಧ ಲೀಟರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯನ್ನು ಗಮನಿಸಿದ ಪಿಡಿಒ ಕೃಷ್ಣಪ್ಪ ಹಾಗೂ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಕಾಪಾಡಿದ್ದಾರೆ.

Related Articles

Back to top button