ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಖ್ಯ ಹೊಂದಲಿವೆ ಎನ್ನುವ ಸುದ್ದಿ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.
ಜಾತ್ಯಾತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದು ಸರಿಯಷ್ಠೆ. ಆದರೆ ಯಾವುದೇ ಜೆ.ಡಿ.ಎಸ್. ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆ.ಡಿ.ಎಸ್. ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಅವರು ಹೇಳಿದ್ದಾರೆ.
ಕೇವಲ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನ: ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಠವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಮಾಧ್ಯಮಗಳಲ್ಲಿ ಬರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಅವರು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ