ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದಿನಿಂದ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಹೆಸರಲ್ಲಿ ಜಂಟಿ ಪಾದಯಾತ್ರೆ ಆರಂಭಿಸಿದೆ. ಪಾದಯಾತ್ರೆಗೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಡದೇವತೆ ಚಾಮುಂಡಿ ತಾಯಿ ಮೊರೆ ಹೋಗಿದ್ದಾರೆ.
ಮೈಸೂರಿಗೆ ತೆರಳಿರುವ ಬಿ.ವೈ.ವಿಜಯೇಂದ್ರ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಪಾದಯಾತ್ರೆ ಯಶಸ್ವಿಯಾಗಲೆಂದು ಪ್ರಾರ್ಥಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಹಗರಣಗಳ ವಿರುದ್ಧದ ಹೋರಾಟ ಯಶಸ್ವಿಯಾಗಬೇಕು. ನಮ್ಮ ಕಾರ್ಯಕರ್ತರು ಪಾದಯಾತ್ರೆಗೆ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ. ನಿರೀಕ್ಷೆಗೂ ಮೀರಿ ಜನರು ಬೆಂಬಲ ನೀಡಲಿದ್ದಾರೆ. ನಮ್ಮ ಹೋರಾಟ ಹತ್ತಿಕ್ಕುವ ಯಾವ ಪ್ರಯತ್ನಕ್ಕೂ ಬಗ್ಗುವುದಿಲ್ಲ. ಇಂದಿನಿಂದ ಆಗಸ್ಟ್ 10ರವರೆಗೆ ಪಾದಯಾತ್ರೆ ನಡೆಯಲಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ