Karnataka NewsLatestPolitics

*ಸ್ಪೀಕರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದಬಿಜೆಪಿ ನಾಯಕರು; ಮಾಜಿ ಸಿಎಂ ಕುಮಾರಸ್ವಾಮಿ ಸಾಥ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ 10 ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ಯು.ಟಿ.ಖಾದರ್ ನಡೆ ಖಂಡಿಸಿ ಬಿಜೆಪಿ ಶಾಸಕರು ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸ್ಪೀಕರ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದರು.

ವಿಧಾಸಭಾ ಕಲಾಪ ಬಹಿಷ್ಕರಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ವಿಧಾನಸಭೆಯಿದ ಬಿಜೆಪಿ 10 ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಸರ್ಕಾರ ಶಿಷ್ಟಾಚಾರ ಉಲ್ಲಂಘನೆ ಮಾಡಿ ಅಧಿಕಾರಿಗಳನ್ನು ವಿಪಕ್ಷ ನಾಯಕರ ಸಭೆಗೆ ಬಳಸಿಕೊಂಡಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಕೋಟಾಶ್ರೀನಿವಾಸ್ ಪೂಜಾರಿ, ಅರಗ ಜ್ಞಾನೇಂದ್ರ, ಮುನಿರತ್ನ, ಸುರೇಶ್ ಕುಮಾರ್, ಬೈರತಿ ಬಸವರಾಜ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

ಪ್ರತಿಭಟನೆ ಬಳಿಕ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಬಿಜೆಪಿ ಪ್ರತಿಭಟನೆಗೆ ಸಾಥ್ ನೀಡುವಂತೆ ಮನವಿ ಮಾಡಿದರು. ಈ ವೇಳೆ ಜೆಡಿಎಸ್ ಶಾಸಕರ ಅಭಿಪ್ರಾಯ ಪಡೆದು ತಿಳಿಸುವುದಾಗಿ ಕುಮಾರಸ್ವಾಮಿ ತಿಳಿಸಿದರು. ಈ ಎಲ್ಲಾ ಬೆಳವಣಿಗೆ ಬಳಿಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒತ್ಟಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದರು.

ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಉಭಯ ಪಕ್ಷಗಳ ನಾಯಕರ ಗುಂಪು ರಾಜ್ಯಪಾಲರನ್ನು ಭೇಟಿಯಾಗಿ ಸ್ಪೀಕರ್ ಹಾಗೂ ಸರ್ಕಾರದ ವಿರುದ್ಧ ದೂರು ನೀಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button