ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ ಆಗಸ್ಟ್ 3ರಿಂದ ಆರಂಭವಾಗಲಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸಂಸತ್ ಭವನದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಬಳಿಕ, ಜೆಡಿಎಸ್ ನಾಯಕರ ಮನವೊಲಿಕೆ ಬಳಿಕ ಮಾತನಾಡಿದ ವಿಜಯೇಂದ್ರ ಈ ವಿಷಯ ತಿಳಿಸಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಧಮೋಹನ್ ದಾಸ್, ಬಂಡೆಪ್ಪ ಕಾಶೆಂಪೂರ್, ಮಲ್ಲೇಶ್ ಬಾಬು ಮೊದಲಾದವರು ಉಪಸ್ಥಿತರಿದ್ದರು.
ಹೆಚ್.ಡಿ.ಕೆ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಆಗಸ್ಟ್ 3ರಂದು ಶನಿವಾರ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆರಂಭವಾಗಲಿದೆ. ಶನಿವಾರ ಬೆಳಿಗ್ಗೆ 8:30ಕ್ಕೆ ಪಾದಯಾತ್ರೆ ಆರಂಭವಾಗಲಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರೇ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದರು.
ಭ್ರಷ್ಟಾಚಾರವಾಗಿರುವುದನ್ನು ಸಿಎಂ ಸಿದ್ದರಾಮಯ್ಯ ಸದನದಲ್ಲಿ ಒಪ್ಪಿಕೊಂಡಿದ್ದಾರೆ. 4 ಸಾವಿರ ಕೋಟಿ ಬೆಲೆ ಬಾಳುವ ಸೈಟ್ ಕೊಡಲಾಗಿದೆ. ಮುಡಾ ಅಕ್ರಮದ ವಿರುದ್ಧ ಬಿಜೆಪಿ-ಜೆಡಿಎಸ್ ಹೋರಾಟ ಮುಂದುವರೆಯಲಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ