*ಕಿಡ್ನಾಪ್ ಮಾಡಿ ಬಿಜೆಪಿ ಮುಖಂಡ ಹಾಗೂ ಆತನ ಪುತ್ರನ ಹತ್ಯೆ: ಬೆಚ್ಚಿಬಿದ್ದ ಎರಡು ರಾಜ್ಯಗಳು*

ಪ್ರಗತಿವಾಹಿನಿ ಸುದ್ದಿ : ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬೆಂಗಳೂರಿನ ಬಿಜೆಪಿ ಮುಖಂಡ ಹಾಗೂ ಆತನ ಮಗನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬೆಂಗಳೂರಿನ ಮಹದೇವಪುರ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ಉದ್ಯಮಿ ಪ್ರಶಾಂತ್ ರೆಡ್ಡಿ ಮತ್ತು ಅವರ ತಂದೆ ವೀರಸ್ವಾಮಿ ರೆಡ್ಡಿಯವರನ್ನು ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಚೆಕ್ ಬೌನ್ಸ್ ಪ್ರಕರಣ ಸಂಬಂಧ ಕೋರ್ಟ್ ಗೆ ತೆರಳುವಾಗ ಕಾಡುಗೋಡಿಯ ವೀರಸ್ವಾಮಿ ರೆಡ್ಡಿ ಹಾಗೂ ಪುತ್ರ ಪ್ರಶಾಂತ್ ರೆಡ್ಡಿಯನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಲಾಗಿದೆ.
ಇಬ್ಬರನ್ನು ಕತ್ತುಕೊಯ್ದು ಕೊಲ್ಲಲಾಗಿದ್ದು, ವೈಯಕ್ತಿಕ ದ್ವೇಷಕ್ಕಾಗಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಕಾಡುಗೋಡಿಯ ವೀರಸ್ವಾಮಿ ರೆಡ್ಡಿ ಹಾಗೂ ಪುತ್ರ ಪ್ರಶಾಂತ್ ರೆಡ್ಡಿಯನ್ನು ಬರ್ಬರವಾಗಿ ಕೊಲೆ ಮಾಡಿರೋದ್ರಿಂದ ಎರಡು ರಾಜ್ಯಗಳು ಬೆಚ್ಚಿಬಿದ್ದಿವೆ.
ಮಾಜಿ ಸಚಿವ, ಬಿಜೆಪಿ ನಾಯಕ ಅರವಿಂದ ಲಿಂಬಾವಳಿಯವರ ಆಪ್ತರೆಂದು ಹೇಳಲಾಗುತ್ತಿರುವ ಈ ತಂದೆ-ಮಗನ ಕೊಲೆ, ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನು ಸೃಷ್ಟಿಸಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಆಂಧ್ರ ಪ್ರದೇಶ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.