Kannada NewsKarnataka NewsLatest

ಬಿಜೆಪಿ ಮುಖಂಡ ದೇವರಾಜೇಗೌಡ ಅರೆಸ್ಟ್ 

ಪ್ರಗತಿವಾಹಿನಿ ಸುದ್ದಿ: ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಬಿಡುಗಡೆಯ ಹಿಂದಿನ ಕಥಾನಾಯಕ ಡಿಸಿಎಂ ಡಿಕೆ ಶಿವಕುಮಾರ್‌ ಎಂದು ಗಂಭೀರ ಆರೋಪ ಮಾಡಿದ್ದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬೆನ್ನಲ್ಲೇ ದೇವರಾಜೇಗೌಡ ಹಿರಿಯೂರು ಠಾಣೆ ಪೊಲೀಸರ ವಶದಲ್ಲಿದ್ದಾರೆ.

Home add -Advt

ಮಹಿಳೆಯರಿಗೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿ ಅವರೇ ಲೈಂಗಿಕ ಕಿರುಕುಳ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಏಪ್ರಿಲ್ 1 ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಮಹಿಳೆಯಿಂದ‌ ದೂರು ನೀಡಲಾಗಿತ್ತು. ಅಜ್ಞಾತ ಸ್ಥಳದಿಂದ ದೇವರಾಜೇಗೌಡ ಅವರೇ ಪೆನ್ ಡ್ರೈವ್ ಬಿಡುಗಡೆ ಮಾಡಿದ್ದರು ಎನ್ನುವ ಆರೋಪ ಕೂಡ ಇದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿತ್ತು.

Related Articles

Back to top button