Kannada NewsKarnataka NewsLatestPolitics

*ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರಿಗೆ ಪ್ರಸ್ತಾವನೆ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರಿಗೆ ಕಲಬುರ್ಗಿ ಪೊಲೀಸರು ಮತ್ತೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಕಲಬುರ್ಗಿ ಉಪನಗರ ಠಾಣೆ ಪೊಲೀಸರು, ಪೊಲೀಸ್ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಮಣಿಕಂಠ ರಾಠೋಡ್ ನನ್ನು ಕಲಬುರ್ಗಿ ವ್ಯಾಪ್ತಿಯಿಂದ ಗಡಿಪಾರು ಮಾಡುವಂತೆ ಮನವಿ ಮಾಡಿದ್ದಾರೆ.

ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಂಗ್ರಹ, ಶಾಂತಿಗೆ ಭಂಗ ತರುವುದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವುದು ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮಣಿಕಂಠ ರಾಠೋಡ್ ಗಡಿಪಾರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಗಡಿಪಾರು ಆದೇಶಕ್ಕೂ ಮುನ್ನ ವಿಚರಣೆ ಹಾಜರಾಗುಂತೆ ಸೂಚಿಸಿದ್ದರೆ. ಡಿ.19ರಂದು ಡಿಸಿಪಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button