ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿ ಇರುವ ಹೊತ್ತಲ್ಲೇ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಚುರುಕುಗೊಂಡಿದೆ. ಇತ್ತೀಚೆಗೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಪುಟ್ಟಣ್ಣ ಬಿಜೆಪಿಗೆ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಇದೀಗ ಬಿಜೆಪಿಯ ಇನ್ನೋವ ಹಿರಿಯ ನಾಯಕ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಬಿಜೆಪಿ ಹಿರಿಯ ಮುಖಂಡ, ವಿಧಾನಪರಿಷತ್ ಮಾಜಿ ಸದಸ್ಯ, ಹಿರಿಯ ವಕೀಲ ಮೋಹನ್ ಲಿಂಬಿಕಾಯಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇಂದೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೋಹನ್ ಲಿಂಬಿಕಾಯಿ ಅವರಿಗೆ ಪಕ್ಷದ ಬಾವುಟ ನೀಡಿ ಕಾಂಗ್ರೆಸ್ ಗೆ ಬರಮಾದಿಕೊಂಡರು.
ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೋಹನ್ ಲಿಂಬಿಕಾಯಿ ಅವರು ಬಿಜೆಪಿ ನಾಯಕರು, ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಅವರ ಕಾನೂನು ಸಲಹೆಗಾರರಾಗಿ ನೇಮಕಗೊಂಡಿದ್ದರು. ಇಂದು ಅವರು ಮಲ್ಲಿಕಾರ್ಜುನ ಖರ್ಗೆ ನಾಯಕತ್ವ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇನ್ನೂ ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ