ಪ್ರಗತಿವಾಹಿನಿ ಸುದ್ದಿ: ಕೇರಳದ ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಎಲ್ಲಾ 15 ಆರೋಪಿಗಳಿಗೂ ಕೇರಳದ ನ್ಯಾಯಾಲಯ ಮರಣದಂಡನೆ ವಿಧಿಸಿ ತೀರ್ಪು ಪ್ರಕಟಿಸಿದೆ.
2021ರ ಡಿಸೆಂಬರ್ 19ರಂದು ಅಲಪ್ಪುಳ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಅವರನ್ನು ಮನೆಗೆ ನುಗ್ಗಿ ಅವರ ಕುಟುಂಬದ ಎದುರಲ್ಲೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಪ್ರಕರಣ ಸಂಬಂಧ ನಿಷೇಧಿತ ಪಿಎಫ್ ಐ ಸಂಘಟನೆಯ 15 ಸದಸ್ಯರನ್ನು ಬಂಧಿಸಲಾಗಿತ್ತು. ಎಲ್ಲಾ ಆರೋಪಿಗಳು ದೋಷಿಗಳೆಂದು ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಲಯ ತೀರ್ಪು ನೀಡಿತ್ತು.
ಇದೀಗ ಎಲ್ಲಾ 15 ಅಪರಾಧಿಗಳಿಗೆ ಕೋರ್ಟ್ ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದೆ. ನಿಜಾಮ್, ಅಜ್ಮಲ್, ಅನೂಪ್, ಎಂಡಿ ಅಸ್ಲಾಂ, ಸಲಾಂ, ಅಬ್ದುಲ್ ಕಲಾಂ, ಸಫರುದ್ದೀನ್, ಮುನ್ಶ್ಯಾದ್, ಜಜೀಬ್, ನವಾಜ್, ಶೆಮೀರ್, ನಜೀರ್, ಜಾಕಿರ್ ಹುಸೇನ್, ಶಾಜಿ, ಶಮ್ನಾಜ್ ಮರಣದಂಡನೆಗೆ ಗುರಿಯಾದ ಅಪರಾಧಿಗಳು. ಇದೇ ಮೊದಲ ಬಾರಿಗೆ ಕೇರಳ ನ್ಯಾಯಾಲಯ ಇಷ್ಟು ದೊಡ್ಡ ಪ್ರಮಾಣದಲ್ಲಿ ಒಂದೇ ಬಾರಿಗೆ 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ