
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನಾಯಕ ಹಾಗೂ ಉದ್ಯಮಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.
ದುಷ್ಕರ್ಮಿಗಳ ಗುಂಡೇಟಿಗೆ ಗೋಪಾಲ್ ಖೇಮ್ಮಾ ಎಂಬ ನಾಯಕ ಸಾವನ್ನಪ್ಪಿದ್ದಾರೆ. ಟ್ವಿನ್ ಟವರ್ ಸೊಸೈಟಿಯಲ್ಲಿ ಖೆಮ್ಮಾ ಅವರು ವಾಸಿಸುತ್ತಿದ್ದರು. ಅವರು ಮನೆ ಕಡೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಅವರ ಮಗ ಗುಂಜನ್ ಖೇಮ್ಮಾ ಅವರನ್ನು ಮೂರು ವರ್ಷಗಳ ಹಿಂದೆ ಕೊಲೆ ಮಾಡಲಾಗಿತ್ತು.
ಗಾಂಧಿ ನಾಗರದ ಮೈದಾನ ಪೊಲೀಸ್ ಠಾಣೆ ಪ್ರದೇಶದ ಪನಾಚೆ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.