
ಪ್ರಗತಿವಾಹಿನಿ ಸುದ್ದಿ, ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಿನ್ಹಟಾದಲ್ಲಿ ಬಿಜೆಪಿ ನಾಯಕರೊಬ್ಬರನ್ನು ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಬಿಜೆಪಿಯ ಸ್ಥಳೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ರಾಯ್ ಬಸುನಿಯಾ ಹತ್ಯೆಯಾದವರು. ಇಬ್ಬರು ಅಪರಿಚಿತರು ಅವರ ಮನೆಗೆ ನುಗ್ಗಿ ಗುಂಡು ಹಾರಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೆ ದಿನ್ಹಟಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಈ ಕುರಿತು ಪೊಲೀಸರು ವಿಶೇಷ ತಂಡ ರಚಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಕೂಚ್ ಬೆಹಾರ್ ಹೆಚ್ಚುವರಿ ಎಸ್‌ಪಿ ತಿಳಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಘಟನೆಯ ನಂತರ ಬಿಜೆಪಿ ಬಿಜೆಪಿ ಶಾಸಕ ಅಗ್ನಿಮಿತ್ರ ಪೌಲ್ ಹೇಳಿಕೆ ನೀಡಿ ಪ್ರಶಾಂತ್ ರಾಯ್ ಬಸುನಿಯಾ ಹತ್ಯೆ ದುರದೃಷ್ಟಕರ ಹಾಗೂ ಖಂಡನೀಯ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರಕಾರ ಬಿಜೆಪಿ ಮುಖಂಡರನ್ನು ಗುರಿಯಾಗಿಸಿಕೊಂಡು ಇಂಥ ಕೃತ್ಯಗಳಿಗೆ ಕಾರಣವಾಗುತ್ತಿದೆ. ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
https://pragati.taskdun.com/yeshwantpur-train-collides-with-derailed-train-more-than-50-dead-more-than-350-injured/
https://pragati.taskdun.com/power-fluctuation-at-different-places/
https://pragati.taskdun.com/if-we-leave-our-inner-ego-and-external-pretentiousness-we-will-be-at-ease-hukkeri-shri/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ