Kannada NewsKarnataka NewsLatest

*ಪರೀಕ್ಷೆ ಬರೆಯುತ್ತಿದ್ದಾಗಲೇ ಕುಸಿದು ಬಿದ್ದ ವಿದ್ಯಾರ್ಥಿ; ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ನಡೆದಿದೆ.

ರಾಹುಲ್ ಕೋಲಕಾರ (15) ಮೃತ ಬಾಲಕ. ಹುಲ್ಯಾಳ ಗ್ರಾಮದ ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ. ಅರ್ಧವಾರ್ಷಿಕ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗೆ ಎದೆನೋವು ಆರಂಭವಾಗಿ ಕುಸಿದು ಬಿದ್ದಿದ್ದಾನೆ.

Home add -Advt

ಶಿಕ್ಷಕರು ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಮಾರ್ಗ ಮಧ್ಯೆ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Related Articles

Back to top button