ಪ್ರಗತಿವಾಹಿನಿ ಸುದ್ದಿ; ಸಂಭಾಲ್: ಬಿಜೆಪಿ ಮುಖಂಡರೊಬ್ಬರನ್ನು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದಿದೆ.
ಸಂಭಾಲ್ ಬಿಜೆಪಿ ಮುಖಂಡ ಅನುಜ್ ಚೌಧರಿ ಅವರನ್ನು ದುಷ್ಕರ್ಮಿಗಳು ಮೊರಾದಾಬಾದ್ ನ ಅವರ ಮನೆಯ ಹೊರಗಡೆಯೇ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
34 ವರ್ಷದ ಅನುಜ್ ಚೌಧರಿ ತಮ್ಮ ಅಪಾರ್ಟ್ ಮೆಂಟ್ ನ ಹೊರಗೆ ಸ್ನೇಹಿತರೊಂದಿಗೆ ನಡೆದು ಹೋಗುತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಮೂವರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಚೌಧರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದರು.
ಪ್ರಕರಣ ಸಂಬಂಧ ಪೊಲೀಸರು ನಾಲ್ವರ ವಿರುದ್ಧ ಕೇಸ್ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ