Belagavi NewsBelgaum NewsKarnataka NewsPolitics

*ಡಾ.ರವಿ ಪಾಟೀಲ್ ಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಅವರಿಗೆ ಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ, ಬೆಳಗಾವಿಯ ವೀರಭದ್ರ ನಗರದ ಸುಮಾರು 198 ಮುಸ್ಲಿಂ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸಲು ಯತ್ನ, ಫಾರಂ 7 ದುರುಪಯೋಗ ಆರೋಪದ ಮೇಲೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಡಾ.ರವಿ ಪಾಟಿಲ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಬಂಧನ ಭೀತಿಯಲ್ಲಿದ್ದ ರವಿ ಪಾಟೀಲ್ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಡಾ. ರವಿ ಪಾಟೀಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

50 ಸಾವಿರ ರೂಪಾಯಿ ಬಾಂಡ್ ಹಾಗೂ ಅಷ್ಟೇ ಮೊತ್ತದ ಒಬ್ಬರ ಜಾಮೀನುದಾರರೊಂದಿಗೆ ಜಾಮೀನು ಮಂಜೂರು ಮಾಡಿ ನ್ಯಾ.ಗಂಗಾಧರ್ ಕೆ.ಎನ್.ಆದೇಶ ಹೊರಡಿಸಿದ್ದಾರೆ. ಸಾಕ್ಷ್ಯಗಳಿಗೆ ಬೆದರಿಕೆ ಹಾಕಬಾರದು, ತನಿಖಾಧಿಕಾರಿಗಳು ಕರೆದಾಗ ಹಾಜರಾಗಬೇಕು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button