Kannada NewsKarnataka NewsLatestPolitics
*BREAKING: ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡರೊಬ್ಬರು ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ.
ಕೌಟುಂಬಿಕ ಕಲಹದಿಂದ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ, ಬಿಜೆಪಿ ಮುಖಂಡ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆ ಮಾಡಿಕೊಂಡವರು.
ಕಾರಿನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆಯ ನಾಗನೂರು ಬಳಿಯ ತೋಟದಲಿ ಈ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ಚಂದ್ರಶೇಖರ್ ಅವರ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿರುವಾಗಲೇ ಮನನೊಂದ ಚಂದ್ರಶೇಖರ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.


