*BREAKING: ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡರೊಬ್ಬರು ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ, ಬಿಜೆಪಿ ಮುಖಂಡ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆ ಮಾಡಿಕೊಂಡವರು. ಕಾರಿನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆಯ ನಾಗನೂರು ಬಳಿಯ ತೋಟದಲಿ ಈ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ಚಂದ್ರಶೇಖರ್ ಅವರ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading *BREAKING: ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡ*