ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ದೇವೇರಾಜೇಗೌಡರನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ನಿನ್ನೆ ಪೊಲೀಸರು ಕೋರ್ಟ್ ನಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ಕೋರ್ಟ್ ದೇವರಾಜೇಗೌಡರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿತ್ತು.
ಹಾಸನ ಜಿಲ್ಲಾ ಕಾರಾಗೃಹದಲ್ಲಿದ್ದ ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಡಿವೈಎಸ್ ಪಿ ಅಶೋಕ್ ನೇತೃತ್ವದಲ್ಲಿ ಕಸ್ಟಡಿಗೆ ಪಡೆಯಲಾಗಿದೆ. ಮೇ 16ವರೆಗೆ ಪೊಲೀಸ್ ಕಸ್ಟಡಿಯಲ್ಲಿರಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ