
ಪ್ರಗತಿವಾಹಿನಿ ಸುದ್ದಿ: ಕಲಬುರ್ಗಿ ಬಿಜೆಪಿ ಸಂಸದ ಉಮೇಶ್ ಜಾದವ್ ಆಪ್ತ, ಬಿಜೆಪಿ ಯುವ ಮುಖಂಡ ಗಿರೀಶ್ ಚಕ್ರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಂತಕರನ್ನು ಗಾಣಗಾಪುರ ಪೊಲೀಸರು ಬಧಿಸಿದ್ದಾರೆ.
ಓರ್ವ ಬಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಸಚಿನ್ ಕಿರಸಾವಳಗಿ, ವಿಶ್ವನಾಥ್ ಅಲಿಯಾಸ್ ಕುಮ್ಯಾ, ಪ್ರಜ್ವಲ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಬಾಲಕನಾಗಿದ್ದಾನೆ.
ಫೆ.29ರಂದು ಪಾರ್ಟಿ ಕೊಡಿಸುವ ನೆಪದಲ್ಲಿ ಗಿರೀಶ್ ಚಕ್ರನನ್ನು ಕರೆದೊಯ್ದಿದ್ದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಈ ಘಟನೆ ನಡೆದಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ