Latest

*ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಹೊಳೆನರಸೀಪುರ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.

Home add -Advt

ದೇವರಾಜೇಗೌಡ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆ ಪೊಲೀಸರು ದೇವರಾಜೇಗೌಡರನ್ನು ಹೊಳೆನರಸೀಪುರದ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ದೇವರಾಜೇಗೌಡರನ್ನು ಇನ್ನಷ್ಟು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ಪೊಲೀಸರ ಮನವಿ ಪುರಸ್ಕರಿಸಿದ ಕೋರ್ಟ್ ದೇವರಾಜೇಗೌಡ ಅವರನ್ನು ನಾಳೆ ಬೆಳಿಗ್ಗೆ 9 ಗಂಟೆಯಿಂದ ಮೇ 16ರ ರಾತ್ರಿವರೆಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

Related Articles

Back to top button