*ಮಾಧವಿಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ: ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನಾಯಕಿ ಕೊಂಪೆಲ್ಲಾ ಮಾಧವಿಲತಾರಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್​ 23ರವರೆಗೆ ಅಂದರೆ ಬರೋಬ್ಬರಿ ಒಂದು ತಿಂಗಳ ಕಾಲ ಕೊಂಪೆಲ್ಲಾ ಮಾಧವಿಲತಾ ಅವರಿಗೆ ಬಾಗಲಕೋಟೆ ಜಿಲ್ಲೆ ಪ್ರವ್ರ‍ೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಡಿಸಿ ಸಂಗಪ್ಪ ಆದೇಶ ಹೊರಡಿಸಿದ್ದಾರೆ. ಹಿಂದೂ ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಮಾಧವಿಲತಾ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಪ್ರಚೋದನಾಕಾರಿ ಭಾಷಣ ಸಾಧ್ಯತೆ ಹಿನ್ನೆಲೆಯಲ್ಲಿ ಎಸ್​ಪಿ ಸಿದ್ದಾರ್ಥ್ ಗೋಯೆಲ್ ಪತ್ರದ ಮೇರೆಗೆ ಮಾಧವಿಲತಾರಿಗೆ ನಿರ್ಬಂಧವಿಧಿಸಿ … Continue reading *ಮಾಧವಿಲತಾಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ: ಕಾರಣವೇನು?*