ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ.
ಮಲ್ಲಿಕಾರ್ಜುನ್ ಮುತ್ಯಾಲ (64) ಕೊಲೆಯಾದ ಬಿಜೆಪಿ ಮುಖಂಡ. ಕಲಬುರ್ಗಿ ಜಿಲ್ಲೆಯ ಸೇಡಂ ನಿವಾಸಿಯಾಗಿರುವ ಮಲ್ಲಿಕಾರ್ಜುನ ಮುತ್ಯಾಲ ಎಲೆಕ್ಟ್ರಾನಿಕ್ ಅಂಗಡಿ, ಟಿವಿ ಶಾಪ್ ನಡೆಸುತ್ತಿದ್ದರು. ಜೆಡಿಎಸ್ ಕಾರ್ಯಕರ್ತರಾಗಿದ್ದ ಇವರು ಇತ್ತೀಚೆಗೆ ಬಿಜೆಪಿ ಸೇರಿದ್ದರು. ನಿನ್ನೆ ನಡೆದಿದ್ದ ಬಿಜೆಪಿ ಜನಸಂಕಲ್ಪ ಸಮಾವೇಶಲ್ಲಿಯೂ ಪಾಲ್ಗೊಂಡಿದ್ದರು ಎನ್ನಲಾಗಿದೆ.
ಈಗ ಅವರ ಅಂಗಡಿಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಇಂದು ಬೆಳಿಗ್ಗೆ ಎಷ್ಟೊತ್ತಾದರೂ ಮನೆಗೆ ಬಾರದ ಮುತ್ಯಾಲರನ್ನು ಹುಡುಕಿಕೊಂಡು ಕುಟುಂಬದವರು ಅಂಗಡಿ ಬಳಿ ಬಂದಿದ್ದಾಗ ತಮ್ಮದೇ ಅಂಗಡಿಯಲ್ಲಿ ಕೊಲೆಯಾಗಿ ಬಿದಿರುವುದು ಗೊತ್ತಾಗಿದೆ. ಮರ್ಮಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಸೇಡಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಯ ಹಿಂದ ಕಾರಣ ತಿಳಿದುಬಂದಿಲ್ಲ. ಈ ಹಿಂದೆಯೂ ಒಮ್ಮೆ ದುಷ್ಕರ್ಮಿಗಳು ಮುತ್ಯಾಲ ಅವರ ಮೇಲೆ ದಾಳಿ ನಡೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
BJP ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ FIR ದಾಖಲು
https://pragati.taskdun.com/mla-m-p-renukacharyafir-filenamati-police/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ