ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ವಿಧಾನಸಭೆ ಚುನಾವಣೆ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಕಲಬುರ್ಗಿಯ ಭಾರತ್ ಪ್ರೈಡ್ ಅಪಾರ್ಟ್ ಮೆಂಟ್ ಫ್ಲ್ಯಾಟ್ ನಲ್ಲಿ ಮಣಿಕಂಠ ರಾಠೋಡ್ ನನ್ನು ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಪಘಾತವನ್ನು ಕೊಲೆಯತ್ನ ಎಂದು ಬಿಂಬಿಸಿದ್ದ ಮಣಿಕಂಠ ರಾಠೋಡ್ ನ ನಾಟಕ ತನಿಖೆ ವೇಳೆ ಬಯಲಾಗಿತ್ತು. ಇಂದು ಸುದ್ದಿಗೋಷ್ಠಿ ನಡೆಸಲು ಸಿದ್ಧತೆ ನಡೆಸಿದ್ದ ರಾಠೋಡ್ ನನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಕೆಳೆದ ತಿಂಗಳು ಮಣಿಕಂಠ ರಾಠೋಡ್, ದುಷ್ಕರ್ಮಿಗಳು ತನ್ನ ಕಾರು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೇ ಇದರ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಕೈವಾಡವಿದೆ ಎಂದು ಆರೋಪಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ತನಿಖೆ ಚುರುಕುಗೊಳಿಸಿದ್ದರು. ಈ ವೇಳೆ ಅಪಘಾತವಾದದ್ದನ್ನು ಹಲ್ಲೆ ಎಂದು ಆರೋಪಿಸಿ ಕೊಲೆಯತ್ನ ಎಂದು ಬಿಂಬಿಸಿದ್ದು ಸಾಬೀತಾಗಿತ್ತು. ನಿನ್ನೆಯಷ್ಟೇ ಮಣಿಕಂಠ ರಾಠೋಡ್ ನಾಟಕ ಬಟಾಬಯಲಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇಂದು ಸುದ್ದಿಗೋಷ್ಠಿ ನಡೆಸಲು ಸಿದ್ಧತೆ ನಡೆಸಿದ್ದರು. ಇದೀಗ ಸುದ್ದಿಗೋಷ್ಠಿಗೂ ಮುನ್ನ ರಾಠೋಡ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ