ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ-ಎನ್ ಐಎ ಘೋಷಣೆ ಮಾಡಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್ ಐ ಎ ತಂಡ ಇತ್ತೀಚೆಗೆ ಮೂವರು ಆರೋಪಿಗಳನ್ನು ಬಂಧಿಸಿತ್ತು. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ದಕ್ಷಿಣ ಕನ್ನಡ ಜಿಲ್ಲೆಯ ಷರೀಫ್ ಹಾಗೂ ನೆಕ್ಕಿಲಾಡಿಯ ಮಸೂದ್ ಕೆ.ಎ ತಲೆಮರೆಸಿಕೊಂಡಿದ್ದಾರೆ. ಅವರರಿಬ್ಬರ ಪತ್ತೆಗಾಗಿ ಎನ್ ಐಎ ಕಾರ್ಯಾಚರಣೆ ಚುರುಕುಗೊಳಿಸಿದೆ.
ಈ ಮಧ್ಯೆ ಎನ್ ಐಎ ಅಧಿಕಾರಿಗಳು, ಇಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ಬಹುಮಾನ ಘೋಷಿಸಿದ್ದಾರೆ. ಷರೀಫ್ ಹಾಗೂ ಮಸೂದ್ ಬಗ್ಗೆ ಮಾಹಿತಿ ನೀಡಿದರೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು. ಆರೋಪಿಗಳ ಸುಳಿವು ಸಿಕ್ಕಲ್ಲಿ ಬೆಂಗಳೂರಿನ ದೊಮ್ಮಲೂರು ಬಳಿ ಎನ್ ಐಎ ಅಧಿಕಾರಿಗಳಿಗೆ ತಿಳಿಸುವಂತೆ ಮನವಿ ಮಾಡಿದೆ.
*ಹಾವೇರಿ BJP ಪಾಳಯದಲ್ಲಿ ಸಂಚಲನ ಮೂಡಿಸಿದ ಡಿ.ಕೆ.ಶಿವಕುಮಾರ್ ಹೇಳಿಕೆ*
https://pragati.taskdun.com/d-k-shivakumarhaveribjp-mlascongress/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ