Belagavi NewsBelgaum NewsKarnataka NewsLatest

*ಬೆಳಗಾವಿಯಲ್ಲಿ ಫರ್ನೀಚರ್ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಫರ್ನೀಚರ್ ಅಂಗಡಿಯಲ್ಲಿ ಏಕಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ,

ಮೂಡಲಗಿ ತಾಲೂಕಿನ ಸಂಗನಕೇರಿ ಕ್ರಾಸ್ ಬಳಿ ಇರುವ ಪಾಟೀಲ್ ಒಡೆತನದ ಪೀಠೋಪಕರಣದ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಸ್ಫೋಟದಂತೆ ಶಬ್ಧಗಳು ಕೇಳಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಲಕ್ಷಾಂತರ ಮೌಲ್ಯದ ಪೀಠೋಪಕರಣಗಳು, ವಸ್ತುಗಳು ಬೆಂಕಿಗಾಹುತಿಯಾಗಿವೆ.


Related Articles

Back to top button