ರಾಜ್ಯ ರಾಜಕಾರಣದಲ್ಲಿ ಸಂಚಲನ: ಬಿಜೆಪಿ ಮುಖಂಡರು ಸೋಮವಾರ ಕಾಂಗ್ರೆಸ್ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:  ಭಾನುವಾರ ರಾತ್ರಿ ಕಾಂಗ್ರೆಸ್ ಕಚೇರಿಯಿಂದ ಬಂದಿರುವ ಮಾಧ್ಯಮ ಆಹ್ವಾನ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಸೋಮವಾರ ಸಂಜೆ 4 ಗಂಟೆಗೆ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಮತ್ತಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಮುಖಂಡರು ತಮ್ಮ ಬೆಂಬಲಿಗರ ಜತೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ದಿನಾಂಕ 21-11-2022 ರಂದು ಸೋಮವಾರ ಸಂಜೆ 4.00 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದ್ದು, ಮಾಧ್ಯಮಗಳಿಗೆ ಆಹ್ವಾನ ನೀಡಲಾಗಿದೆ.

ಬಿಜೆಪಿಯ ಯಾವ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಗುಟ್ಟು ಬಿಟ್ಟುಕೊಟ್ಟಿಲ್ಲ.

Home add -Advt

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button