Karnataka NewsNationalPolitics

*ದಿಢೀರ್ ದೆಹಲಿ ಪ್ರವಾಸ ಕೈಗೊಂಡ ಬಿಜೆಪಿ ನಾಯಕರು*

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮಂಗಳವಾರ ದಿಢೀರ್ ದೆಹಲಿಗೆ ತೆರಳಿದ್ದಾರೆ. ಅದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕೂಡಾ ಇಂದು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಸ್ಥಾನದ ಘೋಷಣೆಯಾಗಬಹುದಾದ ಸಾಧ್ಯತೆ ಹಿನ್ನೆಲೆ ಹೆಚ್ಚಿನ ಮಾತುಕತೆಗೆ ವಿಜಯೇಂದ್ರ ಸಹ ನಾಯಕರ ಭೇಟಿಗೆ ದಿಲ್ಲಿಗೆ ತೆರಳಿದ್ದಾರೆ ಎನ್ನಲಾಗಿದೆ.

ಉಭಯ ನಾಯಕರ ಭೇಟಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಬಿಜೆಪಿ ಹೈಕಮಾಂಡ್‌ ರಾಜ್ಯಾಧ್ಯಕ್ಷರ ನೇಮಕಾತಿ ಕುರಿತು ಶೀಘ್ರದಲ್ಲೇ ತೀರ್ಮಾನವನ್ನು ಪ್ರಕಟಿಸಬಹುದು ಎಂಬ ನಿರೀಕ್ಷೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್, ಇಬ್ಬರು ನಾಯಕರನ್ನು ಬಿಜೆಪಿ ಹೈಕಮಾಂಡ್‌ ದೆಹಲಿಗೆ ಕರೆಸಿಕೊಂಡಿದೆಯೇ ಅಥವಾ ಇವರಾಗಿಯೇ ಹೈಕಮಾಂಡ್ ಭೇಟಿ ಮಾಡಲು ತೆರಳಿದ್ದಾರೆಯೇ ಎಂಬುದು ನಿಗೂಢವಾಗಿಯೇ ಉಳಿದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button