Latest

ಬಿಜೆಪಿ ನಾಯಕರಿಗೆ ಹೈಕಮಾಂಡ್ ಖಡಕ್ ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪನವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಹೈಕಮಾಂಡ್ ತಾತ್ಕಾಲಿಕ ಕದನ ವಿರಾಮ ಘೋಷಣೆ ಮಾಡಿದೆ.

ರಾಜ್ಯ ಬಿಜೆಪಿ ನಾಯಕರಿಗೆ ಖಡಕ್ ಸಂದೇಶ ನೀಡಿರುವ ಹೈಕಮಂಡ್, ಜೂನ್ 14ರವರೆಗೆ ನಾಯಕತ್ವ ಬದಲಾವಣೆ ಬಗ್ಗೆ ಯಾರೋಬ್ಬರೂ ಚರ್ಚಿಸುವಂತಿಲ್ಲ. ಸಚಿವರಾಗಲಿ, ಶಾಸಕರಾಗಲಿ, ಸಂಸದರಾಗಲಿ ನಾಯಕತ್ವ ಬದಲಾವಣೆ ಪರವಾಗಿಯಾಗಲಿ, ವಿರೋಧವಾಗಿಯಾಗಲಿ ಹೇಳಿಕೆ ನೀಡುವಂತಿಲ್ಲ ಎಂದು ಸೂಚಿಸಿದೆ.

Home add -Advt

ಸರ್ಕಾರ ಹಾಗೂ ಪಕ್ಷದ ಇಮೇಜ್ ಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದೆ. ಅಲ್ಲದೇ ಸಚಿವ ಸಿ.ಪಿ.ಯೋಗೇಶ್ವರ್ ಗೂ ಈ ಬಗ್ಗೆ ಸ್ಪಷ್ಟ ಸಂದೇಶ ನೀಡಲಾಗಿದೆ ಎನ್ನಲಾಗಿದೆ.

Related Articles

Back to top button