
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನಾಯಕರೊಬ್ಬರನ್ನು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಹರಿಯಾಣದ ಸೋನಿಪತ್ ಜಿಲ್ಲೆಯಲ್ಲಿ ನಡೆದಿದೆ.
ಸೋನಿಪತ್ ಜಿಲ್ಲೆಯ ಮುಂಡ್ಲಾನಾ ಬಿಜೆಪಿ ಮಂಡಲ ಅಧ್ಯಕ್ಷ ಸುರೇಂದ್ರ ಜವಾಹರ್ ಕೊಲೆಯಾದ ಬಿಜೆಪಿ ಮುಖಂಡ. ಭೂ ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ದುಷ್ಕರ್ಮಿಗಳು ಸುರೇಂದ್ರ ಜವಾಹರ್ ಅವರನ್ನು ಬೆನ್ನಟ್ಟಿ ಹೋಗಿದ್ದಾರೆ. ತಪ್ಪಿಸಿಕೊಳ್ಳಲು ಜವಾಹರ್ ಅಂಗಡಿಯೊಂದಕ್ಕೆ ನುಗ್ಗಿದ್ದಾರೆ. ಆದಾಗ್ಯೂ ಬಿಡದ ದುಷ್ಕರ್ಮಿಗಳು ಗುಂಡಿಟ್ಟು ಕೊಂದು ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.