Uncategorized
*ಬಿಜೆಪಿ ಸಭೆ ವೇಳೆಯೇ ಮುಖಂಡನಿಗೆ ಹೃದಯಾಘಾತ; ಆಸ್ಪತ್ರೆಗೆ ಹೋಗುವಷ್ಟರಲ್ಲೇ ಕೊನೆಯುಸಿರೆಳೆದ ಸಿದ್ದೇಶ್ ಯಾದವ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ಬಿಜೆಪಿ ನಾಯಕರ ಸಭೆಯ ವೇಳೆ ದುರಂತವೊಂದು ಸಂಭವಿಸಿದೆ. ಬಿಜೆಪಿ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಳ್ಳಾರಿಯ ಬಿಜೆಪಿ ಮುಖಂಡ ಸಿದ್ದೇಶ್ ಯಾದವ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಸಿದ್ದೇಶ್ ಯಾದವ್ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದರೆ ಅಷ್ಟರಲ್ಲೇ ಸಿದ್ದೇಶ್ ಯಾದವ್ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ