
ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ, ಬಿಜೆಪಿ ನಾಯಕ ರೇಣುಕಾಚಾರ್ಯ ವಿರುದ್ಧ ದಾವಣಗೆರೆ ಬಡಾವಣೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿ ರಸ್ತೆತಡೆ ನಡೆಸಿ, ಧರಣಿ ನಡೆಸಿದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಾಗಿದೆ.
ಆಗಸ್ಟ್ 23ರಂದು ದಾವಣಗೆರೆಯ ಜಯದೇವ ವೃತ್ತದಲ್ಲಿ ರೇಣುಕಾಚಾರ್ಯ ಅವರು ರಸ್ತೆ ತಡೆ ನಡೆಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಡಿಸಿ ಆದೇಶ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.