
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಯುವ ಮುಖಂಡನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಸಿರಗುಪ್ಪದ ಬಿಜೆಪಿ ಯುವ ಮುಖಂಡ ದೇವು ನಾಯಕ ಎಂಬಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ದೇವು ನಾಯಕ್ ವಿರುದ್ಧ ಸಿರಿಗೆರೆ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಆರೋಪಿ ದೇವು ನಾಯಕ್ ನನ್ನು ಪೊಲೀಸರು ಬಂಧಿಸಿದ್ದಾರೆ.