*ಸಾಲ ಕೊಡಿಸುವುದಾಗಿ ಕರೆದೊಯ್ದು ಮಹಿಳೆ ಮೇಲೆ ಅತ್ಯಾಚಾರ ಯತ್ನ; ಬಿಜೆಪಿ ಮುಖಂಡ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡರೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಮಹಿಳೆಯೊಬ್ಬರಿಗೆ ಸಾಲ ಕೊಡಿಸುವುದಾಗಿ ಹೇಳಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಬಿಜೆಪಿ ಮುಖಂಡ ಚಲುವರಾಮು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಾತನೂರು ಹೋಬಳಿಯ ಸೂರನಹಳ್ಳಿಯ ಬಿಜೆಪಿ ಮುಖಂಡ ಚಲುವರಾಮು ಮಹಿಳೆಯೊಬ್ಬರಿಗೆ ಜಮೀನಿನ ಮೇಲೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ರಾಮಗಡ್ ಹೋಟೆಲ್ ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಮಹಿಳೆ ಸಾತನೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಸೋಮವಾರ ಸಾಯಂಕಾಲ ಸಾಲಕೊಡಿಸುವುದಾಗಿ ಹೇಳಿ ರಾಮನಗರಕ್ಕೆ ಕರೆಸಿಕೊಂಡಿದ್ದಾರೆ. ಅಲ್ಲಿಂದ ಚಲುವರಾಮು, … Continue reading *ಸಾಲ ಕೊಡಿಸುವುದಾಗಿ ಕರೆದೊಯ್ದು ಮಹಿಳೆ ಮೇಲೆ ಅತ್ಯಾಚಾರ ಯತ್ನ; ಬಿಜೆಪಿ ಮುಖಂಡ ಅರೆಸ್ಟ್*