
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸಂಸದ ಉಮೇಶ್ ಜಾದವ್ ಆಪ್ತ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಡೆದಿದೆ.
ನಾಲ್ಕು ದಿನಗಳ ಹಿಂದಷ್ಟೇ ಗಿರೀಶ್ ಚಕ್ರಯನ್ನು ಬಿಎಸ್ ಎನ್ ಎಲ್ ಸಲಹಾ ಸಮಿತಿ ನಿರ್ದೇಶಕರನ್ನಾಗಿ ಉಮೇಶ್ ಜಾದವ್ ನೇಮಕ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸನ್ಮಾನ ಮಾಡುವುದಾಗಿ ರಾತ್ರಿ 10 ಗಂಟೆಗೆ ಗಿರೀಶ್ ಚಕ್ರೆಯನ್ನು ಸ್ನೇಹಿತರು ಕರೆದೊಯ್ದಿದ್ದರು.
ಸನ್ಮಾನಕ್ಕೆಂದು ಬಂದ ಗಿರೀಶ್ ಚಕ್ರ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲಿಸರು ಶೋಧ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ