
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಕಲಾ ಮಸೂತಿ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಉಪ್ಪಿನ ಬೆಟಗೇರಿ ಗ್ರಾಮದ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಈಶ್ವರ್ ಮಸೂತಿ (50) ಆತ್ಮಹತ್ಯೆಗೆ ಶರಣಾದವರು.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಶ್ವರ್ ಮಸೂತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.