Kannada NewsKarnataka NewsLatest

ಮಹಿಳಾ ಮೋರ್ಚಾ ನೂತನ ಪದಾಧಿಕಾರಿಗಳ ಸಭೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ-  ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳ ಸಭೆ  ಚಿಕ್ಕೋಡಿ ಬಿಜೆಪಿ ಕಛೇರಿಯಲ್ಲಿ ನಡೆಯಿತು.

ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಬಿಜೆಪಿಯಲ್ಲಿ ಮಹಿಳೆಯರ ಏಳಿಗೆಗಾಗಿ ಉತ್ತಮ ವೇದಿಕೆ ಕಲ್ಪಿಸಲಾಗಿದೆ. ಈ ವೇದಿಕೆಯನ್ನು ಸದುಪಯೋಗಪಡಿಸಿಕೊಂಡು ಪಕ್ಷ ಸಂಘಟನೆ ಸೇರಿದಂತೆ, ಮಹಿಳೆಯರ ಶ್ರೆಯೋಭಿವ್ರದ್ದಿಗಾಗಿ ಶ್ರಮಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ನಮ್ಮ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪ್ರಜೆಗಳಿಗಾಗಿ ಉತ್ತಮ ಯೋಜನೆಯನ್ನು ಜಾರಿಗೆ ತರುತ್ತಿದ್ದು ಇದನ್ನು ತಳಮಟ್ಟಕ್ಕೆ ಮುಟ್ಟಿಸುವುದು ನಮ್ಮೆಲ್ಲರ ಗುರಿಯಾಗಿದೆ. ಬಿಜೆಪಿ ಮಹಿಳಾ ಮೋರ್ಚಾ ಸ್ತ್ರೀಯರ ಏಳಿಗೆಗಾಗಿ ಶ್ರಮಿಸುತ್ತಿದೆ. ನಮ್ಮ ಪಕ್ಷ ಜನಪರ ಚಿಂತನೆಯುಳ್ಳ ಪಕ್ಷವಾಗಿದೆ. ಪಕ್ಷ ಸಂಘಟನೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ರಾಜೇಶ ನೇರ್ಲಿ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಪ್ರೇಮಾ ಭಂಡಾರಿ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶಾಂಭವಿ ಅಶ್ವತಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸತೀಶ ಅಪ್ಪಾಜಿಗೋಳ, ರಮೇಶ ಖೆತಗಡರ, ಮಹಿಳಾ ಮೋರ್ಚಾ ಸದಸ್ಯರು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button